ಈ ಕಾದಂಬರಿಯು ತೆರೆದಿಡುವ ಲೋಕ ಬಹುಕಾಲ ನಮ್ಮ ಮನಸ್ಸನ್ನು ಅಶಾಂತಗೊಳಿಸುತ್ತದೆ. ಗಾಢ ದುಃಖವೊಂದು ಆವರಿಸಿ ಒಲ್ಲೆ ಎಂಬುವವರನ್ನೂ ಬಿಡದೆ ವಿಚಾರದಾಳಕ್ಕೆ ಎಳೆಯುತ್ತದೆ. ಮುರಿದ ದೋಣಿಯನ್ನು ಹೇಗೋ ದುರಸ್ತಿ ಮಾಡಬಹುದು. ಕಡಲೇ ಮುರಿದರೆ?ಈ ಕಾದಂಬರಿಯ ನಾಯಕ ನಾಯಕಿ ಖಳ ಎಲ್ಲವೂ ಒಂದೇ! ಅದು ಮಾನುಷ ನೀಚತನ. ಇಂತಹ ಮಾನುಷನೀಚತ್ವದ ಒಳಗನ್ನು ನೆಲ ಕಾಡು ನೀರು ಈ ಮೂರು ನೆಲೆಗಳಲ್ಲೂ ಸಂದರ್ಭಗಳನ್ನು ಸೃಷ್ಟಿಸಿಕೊಳ್ಳುತ್ತ ಕಾದಂಬರಿಯು ಬಗೆಯುತ್ತದೆ. ಜೀವಂತ ಮನುಷ್ಯ ಜೀವಂತ ಪ್ರಾಣಿ ಜೀವಂತ ವಸ್ತುವನ್ನು ಜೀವವಿರುವಾಗಲೇ ಒಡೆದು ಛಿದ್ರಗೊಳಿಸಿ ಆನಂದಿಸುವ ಮನುಷ್ಯ ಮತ್ತು ಇದು ವಿನಾಶಕಾರಿಯೆಂದು ತಿಳಿದೂ ಮೌನವಾಗಿ ಬೆಂಬಲಿಸುವ ಗುಂಪು ಎರಡೂ ಎಂದೂ ಇರುತ್ತವೆ. ಕೊನೆಗೆ ಉಳಿಯುವ ಸಂಕಟ - ತಮ್ಮ ಪಾಡಿಗೆ ಬದುಕುವ ಬಹುಜನರ ಗುಂಪು ಕೊನೆಗೂ ಒಂದು ಹಿಡಿ ನೀಚರ ಪ್ರತ್ಯಕ್ಷ ಯಾ ಪರೋಕ್ಷ ಅಧೀನದಲ್ಲೇ ಇದ್ದುಬಿಡುತ್ತದೆ ಎಂಬುದು.ಆ ಚರಿತ್ರೆಯನ್ನೇ ಈ ಕಾದಂಬರಿ ಪ್ರಸ್ತುತದ ಮಾವೋವಾದಿ ಸಶಸ್ತ್ರ ನಕ್ಸಲ್ ಕ್ರಾಂತಿ ನಿಶ್ಶಬ್ದವಾಗಿ ಜಗತ್ತನ್ನು ಹೀರುತ್ತಿರುವ ಹಿಡಿಯಷ್ಟು ಕಾರ್ಪೊರೇಟ್ ಪಿಪಾಸಿಗಳ ಸಂಚು ಎಂದೂ ಸ್ವಹಿತದ ಆಚೆಗೆ ಯೋಚಿಸದ ರಾಜಕೀಯ ಈ ಮೂರೂ ಭಿತ್ತಿಗಳಲ್ಲಿ ಚಿತ್ರಿಸುತ್ತದೆ. ಇವು ಮೂರೂ ಭಾರತದ ಸಮಸ್ಯೆಗಳಾಗಿರುವಾಗಲೇ ಇಡೀ ವಿಶ್ವದ್ದೂ ಆಗಿರುವ ಕಹಿಸತ್ಯವನ್ನು ಮೂರು ಒಡೆಯುವ ರೂಪಕಗಳ ಮೂಲಕ ತಣ್ಣಗೆ ವಿವರಿಸುವ ವಿವರಣೆಯು ಇಂತಹ ಓದಿಗೆ ತೆರೆದುಕೊಳ್ಳದಿರುವವರೊಳಗೆ ಹೊಟ್ಟೆತೊಳಸು ಉಂಟು ಮಾಡಿದರೆ ಅನಿರೀಕ್ಷಿತವಲ್ಲ.- ಲಲಿತಾ ಸಿದ್ಧಬಸವಯ್ಯA Kannada book by Chanda Pustaka/ ಛಂದ ಪುಸ್ತಕದ ಪ್ರಕಟಣೆ
Piracy-free
Assured Quality
Secure Transactions
Delivery Options
Please enter pincode to check delivery time.
*COD & Shipping Charges may apply on certain items.